Englishs
  • Become an activist

    If you gonna make it better

  • Next Meeting

    23/08/2017

  • Yout Support

    May Help Us

೧೦೦೦ಕ್ಕೂ ಅಧಿಕ ಗ್ರಾಮ ಪಂಚಾಯಿತಿಗಳ ಡಿ.ಪಿ.ಆರ್ ಗಳಿಗೆ ಅನುಮೋದನೆ.

ಶುದ್ಧ ಕುಡಿಯುವ ನೀರು ಮತ್ತು ನೈರ್ಮಲ್ಯ ವ್ಯವಸ್ಥೆಯು ಮಾನವನ ಮೂಲಭೂತ ಹಕ್ಕಾಗಿದ್ದು, ಉತ್ತಮ ಆರೋಗ್ಯ ಹೊಂದಿ ಗೌರವಯುತ ಜೀವನ ನಡೆಸಲು ಅಗತ್ಯವಾಗಿದೆ. ನೈರ್ಮಲ್ಯ ವ್ಯವಸ್ಥೆಯು ಸುವ್ಯವಸ್ಥಿತವಾಗಿರದೆ ಅಸುರಕ್ಷತೆಯಿಂದ ಕೂಡಿದ್ದರೆ, ಅದು ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ  ಹಿನ್ನೆಡೆಯಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಸಂಪೂರ್ಣ ಸ್ವಚ್ಛತೆಯನ್ನು ಸಾಧಿಸಲು ಹೆಚ್ಚಿನ ಪ್ರಯತ್ನ ಹಾಗೂ ಒತ್ತು ನೀಡುವಲ್ಲಿ ರಾಜ್ಯ ಸರ್ಕಾರವು ಮುಂಚೂಣಿಯಲ್ಲಿದೆ.

ಗ್ರಾಮಗಳಲ್ಲಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುವುದರಿಂದ ಪರಿಸರ ಕಲುಷಿತವಾಗಿ ಅನಾರೋಗ್ಯಕರ ಜೀವನವು ಕುಟುಂಬದ ಆರ್ಥಿಕತೆಯ ಮೇಲೆ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಮನೆಹಂತದಲ್ಲಿ ತ್ಯಾಜ್ಯವನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಸೂಕ್ತ ತ್ಯಾಜ್ಯ ನಿರ್ವಹಣಾ ವ್ಯವಸ್ಥೆ ಹೊಂದಿರಬೇಕಾಗುತ್ತದೆ. ಆದ್ದರಿಂದ ಗ್ರಾಮಗಳಲ್ಲಿ ವ್ಯವಸ್ಥಿತ ತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿ ವ್ಯವಸ್ಥೆಯನ್ನು ಕಲ್ಪಿಸಿದರೆ ಮಾತ್ರ ತ್ಯಾಜ್ಯವನ್ನು ಸೂಕ್ತವಾಗಿ ನಿರ್ವಹಣೆ ಮಾಡಿ ಸ್ವಚ್ಛ-ಸ್ವಸ್ಥ ಗ್ರಾಮಗಳನ್ನು ರೂಪಿಸಿ ಸದೃಢ ಸಮಾಜವನ್ನು ರೂಪಿಸಬಹುದಾಗಿದೆ.

ಅಪೇಕ್ಷಣೀಯ ರೀತಿಯಲ್ಲಿ ತ್ಯಾಜ್ಯವನ್ನು ನಿರ್ವಹಿಸುವ ಸಲುವಾಗಿ ಮೂಲದಲ್ಲಿಯೇ  ತ್ಯಾಜ್ಯ ವಿಂಗಡಣೆ ಮತ್ತು ಸೂಕ್ತ ಸಂಗ್ರಹಣೆ-ಸಂಸ್ಕರಣೆ ವ್ಯವಸ್ಥೆಯನ್ನು ಕಲ್ಪಿಸುವುದು ಗ್ರಾಮ ಪಂಚಾಯಿತಿಗಳ ಪ್ರಮುಖ ಜವಾಬ್ದಾರಿಯಾಗಿರುವ ಜೊತೆಗೆ ಸಮುದಾಯದ ಸಹಭಾಗಿತ್ವವೂ ಸಹ ಗಣನೀಯ ಪಾತ್ರ ವಹಿಸುತ್ತದೆ. ಈ ಸಂದರ್ಭಗಳಲ್ಲಿ ಮಾದರಿ ಗ್ರಾಮ ಪಂಚಾಯಿತಿಗಳ ಉತ್ತಮ ಅಭ್ಯಾಸ/ಯಶೋಗಾಥೆಗಳ ಕುರಿತು ಗುಂಪು ಚರ್ಚೆ ಹಾಗೂ ಕ್ಷೇತ್ರ ಭೇಟಿ ಕಾರ್ಯಕ್ರಮಗಳನ್ನೂ ಸಹ ಆಯೋಜಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ತೀರ್ಮಾನಿಸಿ, ಅದರಂತೆ ಕ್ರಮವಹಿಸುತ್ತಿದೆ.

ಅನುದಾನ ಲಭ್ಯತೆ: ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಅಡಿಯಲ್ಲಿ  ಗ್ರಾಮ ಪಂಚಾಯಿತಿಗಳಲ್ಲಿ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ೬೦:೪೦ ಅನುಪಾತದಲ್ಲಿ ಅನುದಾನವನ್ನು  ಒದಗಿಸಲಾಗುತ್ತಿದೆ. ಕುಟುಂಬಗಳ ಸಂಖ್ಯೆಗೆ ಅನುಗುಣವಾಗಿ ಗ್ರಾಮ ಪಂಚಾಯಿತಿಗಳಿಗೆ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪಿಸಲು ಆರ್ಥಿಕ ನೆರವನ್ನು ನೀಡಲು ಅವಕಾಶವಿದೆ.

ಜೊತೆಗೆ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆ, ಮಾನ್ಯ ಸಂಸತ್ ಸದಸ್ಯರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ ಹಾಗೂ ಮಾನ್ಯ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ, ಸ್ವಚ್ಛ ಭಾರತ ಕೋಶ ಮತ್ತು ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ನಿಧಿ ಸೇರಿದಂತೆ ವಿವಿಧ ಯೋಜನೆಯಡಿಯಲ್ಲಿನ ಅನುದಾನವನ್ನು ಒಗ್ಗೂಡಿಸಿ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆ ಮಾಡಬಹುದಾಗಿದೆ.

ತ್ಯಾಜ್ಯಗಳ ವಿಧಗಳು:
ತ್ಯಾಜ್ಯ ಮುಕ್ತ ಗ್ರಾಮಗಳ ನಿರ್ಮಾಣಕ್ಕಾಗಿ ಇಲಾಖೆಯು ತೆಗೆದುಕೊಂಡಿರುವ ಕ್ರಮಗಳು

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಸ್ವಚ್ಛ ಭಾರತ ಮಿಷನ್ (ಗ್ರಾ)ಯೋಜನೆಯಡಿಯಲ್ಲಿ ಘನ ತ್ಯಾಜ್ಯವನ್ನು ಸಮರ್ಪಕ ಹಾಗು ವ್ಯವಸ್ಥಿತ ನಿರ್ವಹಣೆಗೆ ಈವರೆಗೆ ಈ ಕೆಳಕಂಡ ಕ್ರಮಗಳನ್ನು ಕೈಗೊಂಡಿದೆ:

  • ಗ್ರಾಮ ಪಂಚಾಯತಿಗಳಲ್ಲಿ ಘನ ತ್ಯಾಜ್ಯ ನಿರ್ವಹಣೆಯ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ಅನುಕೂಲವಾಗುವಂತೆ ರಾಜ್ಯ ಕಛೇರಿಯಿಂದ ನಿಗದಿತ ವಿಸ್ತೃತ ಯೋಜನಾ ವರದಿ ನಮೂನೆ ಸಿದ್ಧಪಡಿಸಿ ಎಲ್ಲಾ ಜಿಲ್ಲೆಗಳಿಗೂ ಕಳುಹಿಸಿಕೊಡಲಾಗಿದೆ.
  • ಈಗಾಗಲೇ ಘನ ತ್ಯಾಜ್ಯದ ನಿರ್ವಹಣೆಯನ್ನು ಸಮರ್ಪಕವಾಗಿ ಹಾಗು ವ್ಯವಸ್ಥಿತವಾಗಿ ಮಾಡುತ್ತಿರುವ ಗ್ರಾಮ ಪಂಚಾಯತಿಗಳಿಗೆ ಎಲ್ಲ ಜಿಲ್ಲೆಗಳ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಸಮಾಲೋಚಕರುಗಳಿಗೆ ಅಂತರ್ ಜಿಲ್ಲಾ ಕಲಿಕಾ ಪ್ರವಾಸವನ್ನು ಕೈಗೊಳ್ಳಲಾಗಿದೆ.
  • ಘನ ತ್ಯಾಜ್ಯ ನಿರ್ವಹಣೆಯ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ರಾಜ್ಯ ಹಾಗು ಜಿಲ್ಲಾ ಮಟ್ಟದಲ್ಲಿ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಸಮಾಲೋಚಕರು ಹಾಗೂ ಸ್ವಯಂಸೇವಾ ಸಂಸ್ಥೆಗಳು ಸೇರಿದಂತೆ ವಿವಿಧ ಭಾಗೀದಾರರಿಗೆ ನಿರಂತರವಾಗಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
  • ಬೇಡಿಕೆಯನುಸಾರ ರಾಜ್ಯ ಕಛೇರಿಯಿಂದ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಹಾಗೂ ಡಿ.ಪಿ.ಆರ್.ಗಳನ್ನು ಪರಿಶೀಲಿಸಲಾಗುತ್ತಿದೆ.
  • ರಾಜ್ಯ ಕಛೇರಿಯಿಂದ ಜಿಲ್ಲೆಗಳಿಗೆ ಈಗಾಗಲೇ ಅನುಮೋದನೆಗೊಂಡ ಡಿ.ಪಿ.ಆರ್. ಹಾಗು ಅನುಷ್ಠಾನಗೊಳ್ಳುತ್ತಿರುವ ಘಟಕಗಳ ಪ್ರಗತಿಯನ್ನು ಪರಿಶೀಲಿಸಲಾಗುತ್ತಿದೆ.
  • ರಾಜ್ಯದಲ್ಲಿ ಇಲ್ಲಿಯವರೆಗೆ ೧,೭೬೬ ಘನ ತ್ಯಾಜ್ಯ ನಿರ್ವಹಣೆಯ ವಿಸ್ತೃತ ಯೋಜನಾ ವರದಿಗಳು ಸ್ವೀಕೃತವಾಗಿದ್ದು, ಈ ಪೈಕಿ ಸುಮಾರು ೧,೪೭೧ ಗ್ರಾ.ಪಂ.ಗಳ ವಿಸ್ತೃತ ಯೋಜನಾ ವರದಿಗಳಿಗೆ ಅನುಮೋದನೆ ನೀಡಲಾಗಿದೆ. ಇದಕ್ಕಾಗಿ ರೂ.೧೩೭.೧೪೦ ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ.
  • ಘನ ತ್ಯಾಜ್ಯ ನಿರ್ವಹಣೆ ಅನುಷ್ಠಾನಕ್ಕಾಗಿ ಅನುದಾನದ ಕೊರತೆಯಾದಲ್ಲಿ ಗ್ರಾಮ ಪಂಚಾಯತಿ ಅನುದಾನ, ಕೇಂದ್ರ ಹಣಕಾಸು ಆಯೋಗದ ಅನುದಾನ, ಸುವರ್ಣ ಗ್ರಾಮೋದಯ, ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆ (MGNREGA), ಸಂಸತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ (MPLADS), ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ (MLALADs), ಮತ್ತು ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ನಿಧಿ (CSR Fund) ಹಾಗು ವಿವಿಧ ಯೋಜನೆಯಡಿಯಲ್ಲಿನ ಅನುದಾನವನ್ನು ಒಗ್ಗೂಡಿಸಿ ಘನ ತ್ಯಾಜ್ಯ ನಿರ್ವಹಣೆಗೆ ಬಳಸಿಕೊಳ್ಳಲು ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ತಿಳಿಸಲಾಗಿದೆ.
  • ಗ್ರಾಮ ಪಂಚಾಯತಿಗಳಲ್ಲಿ ಆದ್ಯತೆಯ ಮೇರೆಗೆ ಘನ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸಲು ಸಮರ್ಪಕವಾದ ಜಾಗದ ಲಭ್ಯತೆಯನ್ನು ಖಾತರಿಪಡಿಸಿಕೊಂಡು (ಹಳೆಯ ಕಟ್ಟಡ/ಗ್ರಾಮ ಠಾಣ ಜಾಗ/ಜಿಲ್ಲಾಧಿಕಾರಿಗಳಿಂದ ಮಂಜೂರುಗೊಂಡ ಜಾಗ) ಅಗತ್ಯ ದಾಖಲೆ, ಅಂದಾಜುಪಟ್ಟಿಗಳೊಂದಿಗೆ ವಿಸ್ತೃತ ಯೋಜನಾ ವರದಿಯನ್ನು ಸಲ್ಲಿಸಿದಲ್ಲಿ, ಆಡಳಿತಾತ್ಮಕ ಮಂಜೂರಾತಿಗೆ ಕ್ರಮ ವಹಿಸಲಾಗುತ್ತಿದೆ.

 6,852 total views,  2 views today

WhatsApp chat