Englishs
  • Become an activist

    If you gonna make it better

  • Next Meeting

    23/08/2017

  • Yout Support

    May Help Us

ನೀರು ಜೀವ ಜಲ. ಶುದ್ಧ ಕುಡಿಯುವ ನೀರು ದೇಶದ ಪ್ರತಿಯೊಬ್ಬ ನಾಗರೀಕನ ಹಕ್ಕು. ಶುದ್ಧ ನೀರು ಆರೋಗ್ಯವನ್ನು ಕಾಪಾಡುವ ಜೊತೆಗೆ ಸೌಂದರ್ಯವನ್ನೂ ಇಮ್ಮಡಿಗೊಳಿಸುತ್ತದೆ. ದೇಹದ ಉಷ್ಣತೆಯನ್ನು ಕಡಿಮೆ ಮಾಡಿ ದೇಹವನ್ನು ತಂಪಾಗಿಡಲು ಸಹಾಯ ಮಾಡುತ್ತದೆ. ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರನ್ನು ಸರಬರಾಜು ಮಾಡುವ ಮುಖ್ಯ ಉದ್ದೇಶದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಹಿಸುತ್ತಿದೆ. ಗ್ರಾಮೀಣ ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಮುನ್ನ ನೀರಿನ ಗುಣಮಟ್ಟವನ್ನು ಖಾತರಿ ಪಡಿಸಿಕೊಂಡ ನಂತರ ಸರಬರಾಜು  ಮಾಡಬೇಕಾಗಿದೆ.  ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯೋನ್ಮುಖವಾಗಿರುವ ಇಲಾಖೆ ಗ್ರಾಮೀಣ ಪ್ರದೇಶದ ಎಲ್ಲಾ ಕುಡಿಯುವ ನೀರಿನ ಮೂಲಗಳ ಮಾದರಿಗಳಲ್ಲಿರುವ ರಾಸಾಯನಿಕ ಮತ್ತು ಬ್ಯಾಕ್ಟೀರಿಯಾಗಳ ಪರೀಕ್ಷೆಗೆ ಮುಂದಾಗಿದೆ.

ನೀರಿನ ಗುಣಮಟ್ಟವನ್ನು ಹೇಗೆಲ್ಲಾ ಪರೀಕ್ಷಿಸಲಾಗುತ್ತದೆ ಎನ್ನುವುದನ್ನು ನೋಡುವುದಾದರೆ, ಗ್ರಾಮೀಣ ಪ್ರದೇಶದ ಎಲ್ಲಾ ಕುಡಿಯುವ ನೀರಿನ ಮೂಲಗಳ ಮಾದರಿಗಳಲ್ಲಿರುವ ರಾಸಾಯನಿಕ (ಫ್ಲೋರೈಡ್, ಆರ್ಸೆನಿಕ್, ನೈಟ್ರೇಟ್, ಕಬ್ಬಿಣಾಂಶ, ಪಿ.ಹೆಚ್, ಕ್ಲೋರೈಡ್) ಮತ್ತು ಬ್ಯಾಕ್ಟೀರಿಯಾ (ಕೋಲಿಫಾರ್ಮ್, ಈಕೋಲಿ)ಗಳ ಗುಣಮಟ್ಟದ ಪರೀಕ್ಷೆಗಳನ್ನು ಮೊದಲ ಹಂತದಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ, ಗ್ರಾಮದ ನೀರು ಮತ್ತು ನೈರ್ಮಲ್ಯ ಸಮಿತಿಯ ನೆರವಿನೊಂದಿಗೆ Field Test Kit & H2S Vials ಗಳ ಮೂಲಕ ಮತ್ತು ಪ್ರಯೋಗಾಲಯಗಳಲ್ಲಿ  ನೀರಿನ ಗುಣಮಟ್ಟವನ್ನು  ಪರೀಕ್ಷಿಸುವ ಸಲುವಾಗಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಮಟ್ಟದ ಮತ್ತು ೪೭ ತಾಲ್ಲೂಕು ಕೇಂದ್ರಗಳಲ್ಲಿ ಕುಡಿಯುವ ನೀರಿನ ಪರೀಕ್ಷಾ ಪ್ರಯೋಗಾಲಯಗಳನ್ನು ಇಲಾಖೆಯ ವತಿಯಿಂದ ಸ್ಥಾಪಿಸಲಾಗಿದ್ದು, ಈ ಪ್ರಯೋಗಾಲಯಗಳಲ್ಲಿ ನೀರಿನ ಗುಣಮಟ್ಟವನ್ನು ಪರೀಕ್ಷಿಸಲಾಗುತ್ತದೆ.

 Rural Drinking Water and Sanitation Department, Karnataka

ನಂತರ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪ್ರಯೋಗಾಲಯಗಳಲ್ಲಿ ಪರೀಕ್ಷಿಸುವ ನೀರಿನ ಮಾದರಿಗಳಲ್ಲಿ ರಾಸಾಯನಿಕ ಅಂಶವು ನಿಗದಿತ ಮಟ್ಟಕ್ಕಿಂತ ಹೆಚ್ಚಾಗಿರುವುದು ಕಂಡು ಬಂದರೆ, ಅಂತಹ ನೀರಿನ ಮಾದರಿಗಳ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೇಂದ್ರೀಯ ಪ್ರಯೋಗಾಲಯವನ್ನು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ರಾಜ್ಯ ಮಟ್ಟದ Referral laboratory ಯನ್ನಾಗಿ ಉಪಯೋಗಿಸಿಕೊಳ್ಳಲು ಸದರಿ ಮಂಡಳಿಯ ಜೊತೆ ಕರಾರು ಒಪ್ಪಂದವನ್ನು ಮಾಡಿಕೊಳ್ಳಲಾಗಿದ್ದು, ಈ ಪ್ರಯೋಗಾಲಯಗಳಲ್ಲಿಯೂ ನೀರಿನ ಗುಣಮಟ್ಟ ಪರೀಕ್ಷಿಸಲಾಗುತ್ತದೆ.

ಸದರಿ ಮಂಡಳಿಯವರು ನೀಡುವ ನೀರಿನ ಗುಣಮಟ್ಟದ ವರದಿಗಳ ಆಧಾರದ ಮೇಲೆ, ಆ ಜನವಸತಿ ಪ್ರದೇಶದ  ನೀರಿನ ಮಾದರಿಯು  ಕುಡಿಯಲು ಯೋಗ್ಯವಲ್ಲವೆಂದು ಕಂಡು ಬಂದರೆ ಅಂತಹ ಜನವಸತಿ ಪ್ರದೇಶಗಳಿಗೆ ತಾತ್ಕಾಲಿಕ ಪರಿಹಾರವಾಗಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಅಳವಡಿಸುವ ಕಾರ್ಯವನ್ನು ಇಲಾಖೆ ಮಾಡುತ್ತಾ ಬಂದಿದೆ.

Rural Drinking Water and Sanitation Department Karnataka

Rural Drinking Water and Sanitation Department

 6,638 total views,  4 views today

WhatsApp chat